ನವದೆಹಲಿ: ಕ್ರಿಮಿನಲ್ ಕಾನೂನುಗಳನ್ನು ಪರಿಷ್ಕರಿಸುವ ಮೂರು ಮಸೂದೆಗಳನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದ್ದಾರೆ.
 
ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಹೊಸ ಮಸೂದೆಯನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಹೊಸ ಮಸೂದೆಗಳೊಂದಿಗೆ ಸರ್ಕಾರವು ನ್ಯಾಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆಯೇ ಹೊರತು, ಶಿಕ್ಷೆಯನ್ನಲ್ಲ ಎಂದು ಮಸೂದೆ ಮಂಡನೆ ವೇಳೆ ಅಮಿತ್‌ ಶಾ ತಿಳಿಸಿದ್ದಾರೆ.
 
ಅಪರಾಧದ ತೀವ್ರತೆಗೆ ಅನುಗುಣವಾಗಿ ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ, ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಲಂಚ ನೀಡಿದರೆ ಒಂದು ವರ್ಷ ಜೈಲು ಶಿಕ್ಷೆ, ಸಾಮೂಹಿಕ ಅತ್ಯಾಚಾರಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಅಪ್ರಾಪ್ತೆಯರ ಅತ್ಯಾಚಾರಕ್ಕೆ ಮರಣದಂಡನೆ ಅಂಶಗಳನ್ನು ಮಸೂದೆ ಒಳಗೊಂಡಿದೆ.

1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾದಿಂದ ಬದಲಾಯಿಸಲಾಗುವುದು. ಮೊದಲು 511 ವಿಭಾಗಗಳಿದ್ದವು, ಆದರೆ ಈಗ ಅದು 356 ವಿಭಾಗಗಳನ್ನು ಹೊಂದಿರುತ್ತದೆ. 175 ಪರಿಚ್ಛೇದಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Source: Publictv kannada