ಇಂದು ಆಷಾಢ 2ನೇ ಶುಕ್ರವಾರ, ತಾಯಿ ಚಾಮುಂಡೇಶ್ವರಿ ದೇವಿ ಅಲಂಕಾರ ನೋಡಿ

Jun 30, 2023

ಇಂದು(ಜೂನ್ 30) ಮೈಸೂರಿನ ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದಂದು ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಅಷಾಢ ಎರಡನೇ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ಮಾಡಲಾದ ಅಲಂಕಾರವನ್ನು ವಿಡಿಯೋನಲ್ಲಿ ನೋಡಿ.

ಮೈಸೂರು: ಇಂದು(ಜೂನ್ 30) ಮೈಸೂರಿನ ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದಂದು ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾದ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಿತ್ತು. ಅಲ್ಲದೇ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ‌ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇನ್ನು ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ನು ಅಷಾಢ ಎರಡನೇ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ಮಾಡಲಾದ ಅಲಂಕಾರವನ್ನು ವಿಡಿಯೋನಲ್ಲಿ ನೋಡಿ.

Source: TV9Kannada