ಕರೋನ ನಿಯಂತ್ರಣಕ್ಕೆ ಮೈಸೂರು ಡಿಸಿ ರೋಹಿಣಿ ಸಿoಧೂರಿ ಆದೇಶ
ಬೆಂಗಳೂರು ನಗರ ಹಾಗು ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡುಬಂದಿರುತ್ತದೆ. ಮೈಸೂರ್ ಜಿಲ್ಲೆಯಿಂದ ಅನೇಕ ಉದ್ಯೋಗ ವ್ಯಾಪಾರದ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಗೆ ಹೋಗಿ ಬರುತ್ತಿರುತ್ತಾರೆ. ಅಲ್ಲದೆ ಮೈಸೂರು ಜಿಲ್ಲೆಯು ಪ್ರವಾಸಿ ತಾಣವಾಗಿರುವುದರಿಂದ ಅನೇಕ ಪ್ರವಾಸಿಗಳು ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿರುತ್ತಾರೆ. ಇದರಿಂದ ಮೈಸೂರು ಜಿಲ್ಲೆಯಾದ್ಯಾಂತ ಕೋವಿಡ್ ೧೯ ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡುಬಂದಿರುತ್ತದೆ.
ಈ ಹಿನ್ನಲೆಯಲ್ಲಿ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ 19 ನೆಗೆಟಿವ್ ರಿಪೋರ್ಟ್ (ಕಳೆದ 72 ಗಂಟೆಯೊಳಗಿನ )ಅನ್ನು ಹೊಂದಿರುವುದು ಸೂಕ್ತವಾಗಿರುತ್ತದೆ. ಆದ್ದರಿಂದ ಮೇಲ್ಕಂಡ ಸಲಹೆಯನ್ನು ಪಾಲಿಸುವಂತೆ ಹಾಗು ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಸಹಕರಿಸವಂತೆ ಈ ಮೂಲಕ ಕೋರಲಾಗಿದೆ.