ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ ಅಮೆರಿಕ

Feb 4, 2021

Joe Biden led USA Govt Backs India Govt Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಅಮೆರಿಕ ಬೆಂಬಲ ಸೂಚಿಸಿದೆ. ಹೊಸ ಕೃಷಿ ಕಾಯ್ದೆಯಿಂದ ಮಾರುಕಟ್ಟೆ ವಿಸ್ತಾರವಾಗಲಿದೆ. ಹೊಸ ಕಾನೂನಿನಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚುತ್ತೆ. ಶಾಂತಿಪೂರ್ಣ ಪ್ರತಿಭಟನೆ ಪ್ರಜಾಪ್ರಭುತ್ವದ ಸಂಕೇತವಾಗಲಿದೆ…

ದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರು ತಿರುಗಿಬಿದ್ದಿದ್ದಾರೆ. ಗಣರಾಜ್ಯೋತ್ಸವ ದಿನದಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ದೇಶ ತಲೆ ತಗ್ಗಿಸುವಂತಹ ಅನುಭವ ನಿರ್ಮಾಣವಾಗಿತ್ತು. ಆದ್ರೆ ಅದೇ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಅಮೆರಿಕ ಬುಧವಾರ ಬೆಂಬಲ ಸೂಚಿಸಿದೆ.

ಹೊಸ ಕೃಷಿ ಕಾಯ್ದೆಯಿಂದ ಮಾರುಕಟ್ಟೆ ವಿಸ್ತಾರವಾಗಲಿದೆ. ಹೊಸ ಕಾನೂನಿನಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚುತ್ತೆ. ಶಾಂತಿಪೂರ್ಣ ಪ್ರತಿಭಟನೆ ಪ್ರಜಾಪ್ರಭುತ್ವದ ಸಂಕೇತವಾಗಲಿದೆ. ಹೀಗಾಗಿ ಪ್ರತಿಭಟನಾಕಾರರ ಜತೆ ಮಾತುಕತೆ ಅವಶ್ಯಕ. ಮಾತುಕತೆಯಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು 3 ಕೃಷಿ ಕಾಯ್ದೆಗೆ ಅಮೆರಿಕದ ಬೈಡನ್ ಸರ್ಕಾರ ಬೆಂಬಲ ಸೂಚಿಸಿದೆ.

Source:TV9Kannada