ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

Sep 4, 2021

ಬೆಂಗಳೂರು: ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಕೊರೊನಾ ಪರಿಸ್ಥಿತಿಯ ಬಗ್ಗೆ ವಿವರ ಪಡೆದಿದ್ದೇನೆ ಎಂದು ಜಿಲ್ಲಾಧಿಕಾರಿಗಳ ಜತೆ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಡಳಿತಗಳ ಜತೆ ಸಭೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲಾಡಳಿತ ಜತೆ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಸಪ್ಟೆಂಬರ್ 4) ಮಾತುಕತೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ದಿನ ಮಾತ್ರ ಹೆಚ್ಚು ಕೇಸ್ ವರದಿ ಆಗಿದೆ. ಉಳಿದ ದಿನ ಕಡಿಮೆ ಪ್ರಕರಣ ದಾಖಲಾದ ಮಾಹಿತಿ ಲಭ್ಯವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಕಡಿಮೆ ಕೊರೊನಾ ಪ್ರಕರಣಗಳು ಬರ್ತಿದೆ. ಉಡುಪಿಯಲ್ಲಿ ಕೆಲ ಪ್ರದೇಶಗಳಲ್ಲಿ ಮಾತ್ರ ಕೇಸ್ ಹೆಚ್ಚಿದೆ. ಹೆಚ್ಚು ಕೊವಿಡ್ ಟೆಸ್ಟ್ ಮಾಡುವಂತೆ ಸೂಚಿಸಿಲಾಗಿದೆ. ಈಗ ಮಾಡುತ್ತಿರುವ ಟೆಸ್ಟ್‌ಗಿಂತ ಹೆಚ್ಚು ಟೆಸ್ಟ್‌ಗೆ ಸೂಚನೆ ನೀಡಲಾಗಿದೆ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ ಬಗ್ಗೆ ಈಗ ಚರ್ಚೆ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಗಣೇಶ ಚತುರ್ಥಿ ಆಚರಣೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಳಿನ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಲಾಗುವುದು ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಗಡಿ ಜಿಲ್ಲೆಗಳ ಪರಿಸ್ಥಿತಿ ಪರಿಗಣಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಮಾಹಿತಿ ಸಂಗ್ರಹ
ಹಾಸನ ಜಿಲ್ಲೆಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಜಿಲ್ಲಾಧಿಕಾರಿ ಕಡೆಯಿಂದ ಸಿಎಂ ಬೊಮ್ಮಾಯಿ ಮಾಹಿತಿ ಪಡೆದಿದ್ದಾರೆ. ಸೋಂಕು ಹೆಚ್ಚಿರುವ ರಾಜ್ಯದ ಗಡಿ ಜಿಲ್ಲೆಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲೂ ಹೈಅಲರ್ಟ್‌ಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸೋಂಕಿನ ಪ್ರಮಾಣ, ಸಾವು, ವ್ಯಾಕ್ಸಿನ್‌ ನೀಡಿಕೆ ಬಗ್ಗೆ ಹಾಸನ ಜಿಲ್ಲಾಧಿಕಾರಿ ಗಿರೀಶ್‌ರಿಂದ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದಾರೆ.

Source:Tv9kannada