ಟೋಕಿಯೋ 2020 ನೀರಜ್ ಚೋಪ್ರಾ ದೇಶಕ್ಕೆ ಬಂಗಾರ ತೊಡಿಸಿದ ಯೋಧ

Aug 7, 2021

ಟೋಕಿಯೋ(ಆ.07): ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿರೀಕ್ಷೆಯಂತೆ ದೇಶದ ಚಾಂಪಿಯನ್‌ ಜಾವಲಿನ್‌ ಪಟು ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಜಾವಲಿನ್‌ ಫೈನಲ್‌ ಸ್ಪರ್ಧೆಯಲ್ಲಿ ಬರೋಬ್ಬರಿ 85.30 ಮೀಟರ್ ಎಸೆಯುವ ಮೂಲಕ ಪದಕ ಜಯಿಸಿದ್ದಾರೆ. ಭಾರತ ಸ್ವಾತಂತ್ರ್ಯಗೊಂಡ ಬಳಿಕ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಥ್ಲೀಟಿಕ್ಸ್‌ ವಿಭಾಗದಲ್ಲಿ ದೇಶಕ್ಕೆ ನೀರಜ್‌ ಚೋಪ್ರಾ ಮೊದಲ ಪದಕ ಗೆದ್ದು ಕೊಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಉದ್ಯೋಗಿಯಾಗಿರುವ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಮೊದಲ ಪ್ರಯತ್ನದಲ್ಲಿ ನೀರಜ್‌ ಚೋಪ್ರಾ ಬರೋಬ್ಬರಿ 87.03 ಮೀಟರ್‌ ದೂರ ಎಸೆಯುವ ಮೂಲಕ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡರು. ಜರ್ಮನಿಯ ಜೂಲಿಯನ್ ವೇಬರ್ 85.30 ಮೀಟರ್ ದೂರ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಉಳಿದಂತೆ ಮೊದಲ ಸುತ್ತಿನಲ್ಲಿ ಮತ್ತೆ ಯಾವ ಜಾವಲಿನ್‌ ಪಟುವು 85 ಮೀಟರ್‌ಗಿಂತ ದೂರ ಜಾವಲಿನ್ ಎಸೆಯಲಿಲ್ಲ

Source: suvarna news