ದೇಶದಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2.95 ಲಕ್ಷ , ಕಳೆದ 24 ಗಂಟೆಗಳಲ್ಲಿ 2,203 ಮಂದಿ ಸಾವು

Apr 21, 2021

Covid 19 in India: ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಮಂಗಳವಾರ 2,95,041 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಕೊವಿಡ್ ರೋಗಿಗಳ ಸಂಖ್ಯೆ 1,56,16,130ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 24 1,67,457 ಮಂದಿ ಚೇತರಿಸಿಕೊಂಡಿದ್ದು ಈವರೆಗೆ 1,32,76,039 ಮಂದಿ ಗುಣಮುಖರಾಗಿದ್ದಾರೆ.

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್​ನಿಂದ 2,203 ಮಂದಿ ಸಾವಿಗೀಡಾಗಿದ್ದಾರೆ . ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಮಂಗಳವಾರ 2,95,041 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಕೊವಿಡ್ ರೋಗಿಗಳ ಸಂಖ್ಯೆ 1,56,16,130ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 24 1,67,457 ಮಂದಿ ಚೇತರಿಸಿಕೊಂಡಿದ್ದು ಈವರೆಗೆ 1,32,76,039 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ 1,82,553 ಆಗಿದ್ದು ,ದೇಶದಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ. 13,01,19,310 ಮಂದಿ ಲಸಿಕೆ ಪಡೆದಿದ್ದಾರೆ.

ಮಂಗಳವಾರ ಅತೀ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸಾವಿನ ಸಂಖ್ಯೆಯೂ ಗರಿಷ್ಠ ಆಗಿದೆ. ಭಾರತದಲ್ಲಿ ಕೊವಿಡ್ ಎರಡನೇ ಅಲೆಯ ಪರಿಣಾಮ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಯುವ ಜನರು ಮತ್ತು ಮಕ್ಕಳಿಗೂ ಸೋಂಕು ತಗಲುತ್ತಿದೆ. ಮಂಗಳವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಮುಂದೆ ದೊಡ್ಡ ಸವಾಲು ಇದೆ. ಇದನ್ನು ನಾವು ಧೈರ್ಯದಿಂದ ಎದುರಿಸಬೇಕು ಎಂದು ಹೇಳಿದ್ದಾರೆ.

 

Source:TV9Kannada