ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅಭಿನಂದಿಸಿದ ಪ್ರಧಾನಿ

Sep 9, 2021

ದೆಹಲಿಯ ತಮ್ಮ ನಿವಾಸದಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಅವರ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಭಾರತ ಅಮೃತ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತಕ್ಕೆ ಪ್ಯಾರಾಲಂಪಿಕ್ಸ್‌ನಲ್ಲಿ ದಾಖಲೆಯ 19 ಪದಕಗಳನ್ನು ಕ್ರೀಡಾಪಟುಗಳು ಗೆದ್ದಿದ್ದರು. ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಮೋದಿ ವಿಶೇಷವಾಗಿ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಕನ್ನಡಿಗ ಸುಹಾಸ್ ಯತಿರಾಜ್, ಅವನಿ ಲೇಖರಾ ಸೇರಿ ಹಲವು ಕ್ರೀಡಾಪಟುಗಳ ಸಾಧನೆಗೆ ಮೋದಿ ಸಂತಸ ವ್ಯಕ್ತಪಡಿಸಿದರು.

ಈ ಮೊದಲು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿದು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದರು. ಎಲ್ಲಾ ಕ್ರೀಡಾಪಟುಗಳೊಂದಿಗೆ ಫೋಟೋಗೆ ಫೋಸ್ ನೀಡಿದ್ದರು.

Source:publictvkannada