ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ -ಎಸ್ಐಟಿ ಯಿಂದ ತನಿಖೆ ಚುರುಕು
ಗಮನಾರ್ಹವೆಂದರೆ ಪ್ರಕರಣದ ತನಿಖೆಯನ್ನ ಸಿಸಿಬಿ ಕೈಗೆತ್ತಿಕೊಂಡ ಬಳಿಕವೇ ಸಾಕ್ಷ್ಯಗಳನ್ನ ತಿರುಚಲಾಗಿದೆ. ಸೆಪ್ಬಂಬರ್ 9 – 2020 ರಿಂದ ಡಿಸೆಂಬರ್ 16 – 2020 ರ ಅವಧಿಯಲ್ಲಿ ಸಿಸಿಬಿ ಕಚೇರಿ ಹಾಗು ಇತರೆಡೆ ಈ ಅಕ್ರಮ ನಡೆದಿದೆ. ಸಿಸಿಬಿ ತನಿಖಾಧಿಕಾರಿಗಳು ಹಾಗು ಇತರೆ ಅಧಿಕಾರಿಗಳು ಒಳಸಂಚು ರೂಪಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ.