ಮಾಸ್ಕೋ: ಕಳೆದ ತಿಂಗಳು ಭಾರತ ಚಂದ್ರಯಾನ-3 (Chandrayaan-3) ಉಡಾವಣೆ ಮಾಡಿದ್ದು, ಇದರ ಬೆನ್ನಲ್ಲೇ ರಷ್ಯಾ (Russia) ಸುಮಾರು 50 ವರ್ಷಗಳ ಬಳಿಕ ಮೊದಲ ಬಾರಿ ಚಂದ್ರನೆಡೆಗೆ (Moon) ತನ್ನ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ.

ಮಾಸ್ಕೋ: ಕಳೆದ ತಿಂಗಳು ಭಾರತ ಚಂದ್ರಯಾನ-3 (Chandrayaan-3) ಉಡಾವಣೆ ಮಾಡಿದ್ದು, ಇದರ ಬೆನ್ನಲ್ಲೇ ರಷ್ಯಾ (Russia) ಸುಮಾರು 50 ವರ್ಷಗಳ ಬಳಿಕ ಮೊದಲ ಬಾರಿ ಚಂದ್ರನೆಡೆಗೆ (Moon) ತನ್ನ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ.

ಲೂನಾ-25 ಪ್ರೋಬ್ ಅನ್ನು ಹೊತ್ತ ರಾಕೆಟ್ ಗುರುವಾರ ಸ್ಥಳೀಯ ಕಾಲಮಾನ 02:10 ವೇಳೆಗೆ ವೊಸ್ಟೊಚ್ನಿ ಕಾಸ್ಮೊಡ್ರೋಮ್‌ನಿಂದ ಉಡಾವಣೆಯಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ತಿಳಿಸಿದೆ. ಈ ಉಪಗ್ರಹ ಆಗಸ್ಟ್ 21ರ ವೇಳಗೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

ಈ ನೌಕೆ 5 ದಿನಗಳಲ್ಲಿ ಚಂದ್ರನ ಕಕ್ಷೆಯನ್ನು ತಲುಪಲಿದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಯಲಿರುವ ಉಪಗ್ರಹ ಅದಕ್ಕೂ ಮೊದಲು ಸರಿಯಾದ ಸ್ಥಳವನ್ನು ಆಯ್ಕೆ ಮಾಡಲು 3-7 ದಿನಗಳನ್ನು ತೆಗೆದುಕೊಳ್ಳಲಿದೆ.

Source: Publictv kannada