ಮಂತ್ರಾಲಯದ ಗೋ ಶಾಲೆ ವೀಕ್ಷಿಸಿದ ದರ್ಶನ್

Mar 18, 2021

ರಾಯಚೂರು: ” ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರುವೈಭವೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ.”

ಮಂತ್ರಾಲಯ ಗುರುವೈಭವೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸಿರುವ ದರ್ಶನ್, ಸ್ನೇಹಿತರೊಂದಿಗೆ ಮಂತ್ರಾಲಯದಲ್ಲಿ ಗೋ ಶಾಲೆಗಳಲ್ಲಿರುವ ಗೋವುಗಳನ್ನು ವೀಕ್ಷಿಸಿದರು. ಈ ವೇಳೆ ದರ್ಶನ್ ಗೋವುಗಳನ್ನು ಹಿಡಿದುಕೊಂಡಿರುವ ಹಾಗೂ ಕರುವನ್ನು ಹಿಡಿದುಕೊಂಡಿದ್ದಾರೆ.

ಚಿಕ್ಕವರಿದ್ದಾಗ ಹಸುವನ್ನು ಸಾಕಿ ಅದರಿಂದ ಬಂದ ಹಾಲನ್ನು ಮಾರಿ ಸಂಪಾದಿಸಿ ಜೀವನ ನಡೆಸುತ್ತಿದ್ದ ದರ್ಶನ್‍ಗೆ ಗೋವಿನ ಮೇಲೆ ಅಪಾರವಾದ ಗೌರವ, ಭಕ್ತಿ ಹಾಗೂ ನಂಬಿಕೆ ಹೊಂದಿದ್ದಾರೆ.

ದರ್ಶನ್‍ಗೆ ಪ್ರಾಣಿಗಳೆಂದರೆ ಮೊದಲಿನಿಂದಲೂ ಬಹಳ ಇಷ್ಟ. ಇದಕ್ಕೆ ಸಾಕ್ಷಿ ಎಂಬಂತೆ ದರ್ಶನ್ ಮೈಸೂರು ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ಅಲ್ಲದೆ ತಮ್ಮ ಫಾರ್ಮ್ ಹೌಸ್‍ನಲ್ಲಿ ಕುದುರೆ, ಕುರಿ, ಕೋಳಿ, ಪಕ್ಷಿ, ಶ್ವಾನ ಹೀಗೆ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಅಲ್ಲದೆ ಸಿನಿಮಾದಿಂದ ಕೊಂಚ ಬಿಡುವು ಸಿಕ್ಕಿದರೆ ಸಾಕು ಸಫಾರಿಗೆ ಹೋಗಿ ತಮ್ಮ ಕೈಯಾರೆ ಕ್ಯಾಮೆರಾದ ಮೂಲಕ ಪ್ರಾಣಿಗಳ ಫೋಟೋವನ್ನು ಸೆರೆಹಿಡಿಯುತ್ತಾರೆ.

ಇತ್ತೀಚೆಗೆ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಆಂಧ್ರ ಹಾಗೂ ತೆಲಂಗಾಣದಲ್ಲಿ ಬಿಡುಗಡೆಯಾಗಿರುವ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಈ ಸಿನಿಮಾದಲ್ಲಿ ದರ್ಶನ್‍ಗೆ ಜೋಡಿಯಾಗಿ ಆಶಾ ಭಟ್ ಅಭಿನಯಿಸಿದ್ದು, ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

Source: Public tv