ರಾಜ್ಯಕ್ಕೆ ಬೂಸ್ಟರ್ ಡೋಸ್: ಕೇಂದ್ರ ಆರೋಗ್ಯ ಸಚಿವರೊಂದಿಗೆ ಸಿಎಂ ಚರ್ಚೆ
ನವದೆಹಲಿ, ಡಿ.2- ಆರೋಗ್ಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವ್ಯ ಜೊತೆ ಚರ್ಚಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿ ಸಿದ ಅವರು, ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೋವಿಡ್ ತಜ್ಞರ ಜೊತೆ ಚರ್ಚೆ ನಡೆಸುತ್ತೇವೆ. ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ರಾಜ್ಯ ಸರ್ಕಾ ರಗಳಿಗೆ ತಿಳಿಸುತ್ತೇವೆ. ಕೇರಳದಿಂದ ಕೊರೊನಾ ಸೋಂಕು ಹರಡುವ ಬಗ್ಗೆ ರಾಜ್ಯ ಸರ್ಕಾರ ಉತ್ತಮ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಸಚಿವರು ತಮಗೆ ತಿಳಿಸಿದ್ದಾಗಿ ಮುಖ್ಯಮಂತ್ರಿಗಳು ಹೇಳಿದರು. ಕೋವಿಡ್ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಕರ್ನಾಟಕ ಲಸಿಕೆ ನೀಡುವುದರಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೇ ವೇಗ ಮುಂದುವರಿಯಲಿ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ ಎಂದರು.
Source: mysoremithra