ರಾಜ್ಯದಲ್ಲಿ ಇಂದಿನಿಂದ ಸೆ.24 ರ ವರೆಗೆ ಭಾರೀ ಮಳೆ ಸಾಧ್ಯತೆ

Sep 21, 2021

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Source:publictvkannada