ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ – ರಾಜ್ಯ ಸರ್ಕಾರ ಆದೇಶ

Aug 10, 2021

ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡದಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆದೇಶ ಪ್ರಕಟ
ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

CM Order

 

Source: tv9 kannada