ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

Apr 17, 2021

HD Kumaraswamy coronavirus positive: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದಾರೆ: ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ಹೆಚ್​ ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ ಡಿ ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್​ ಡಿ ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್​ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್​ನಲ್ಲಿದ್ದರು.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು

Source: TV9Kannada