6ರಿಂದ ದ್ವಿತೀಯ ಪಿಯುಸಿವರೆಗೆ ಸಂಪೂರ್ಣ ಹಾಜರಾತಿಗೆ ಅವಕಾಶ, ವಾರದಲ್ಲಿ 5 ದಿನ ತರಗತಿ: ಸಿಎಂ ಬೊಮ್ಮಾಯಿ

Sep 24, 2021

ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನುಮುಂದೆ ರಾತ್ರಿ 10ರಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದರು.

Source:tv9kannada