Bengaluru Night Curfew: ಅಕ್ಟೋಬರ್ 11ವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ: ಕಮಲ್ ಪಂತ್ ಆದೇಶ

Sep 27, 2021

ಬೆಂಗಳೂರು: ಜಿಲ್ಲೆಯಲ್ಲಿ ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ ಮುಂದುವರಿಕೆ ಆಗಲಿದೆ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಅದರಂತೆ, ರಾತ್ರಿ 10 ಗಂಟೆಯಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಕೊರೊನಾ ಹಿನ್ನೆಲೆ ನೈಟ್​ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ. ಸೆಪ್ಟೆಂಬರ್ 27ರ ವರೆಗೂ ನೈಟ್​ ಕರ್ಫ್ಯೂ ಜಾರಿಗೊಳಿಸಿತ್ತು. ಇದೀಗ ನೈಟ್ ಕರ್ಫ್ಯೂ ಆದೇಶವನ್ನು ಅಕ್ಟೋಬರ್ 11ರ ವರೆಗೂ ಮುಂದೂಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 181 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ಐವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 504 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 20 ಜನ ಬಲಿಯಾಗಿದ್ದಾರೆ. ಅದರಂತೆ, ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 12,804 ಆಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ

Source:tv9kannada