ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ
ಬಿ.ಎಸ್ ಯಡಿಯೂರಪ್ಪ (
BS Yediyurappa) ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ (
Shivamogga) ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ (
Raghavendra Swamy Mutt) ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಈ ವೇಳೆ ತಂದೆಗೆ ಪುತ್ರ, ಸಂಸದ ಬಿ ವೈ ರಾಘವೇಂದ್ರ (
BY Raghavendra) ಕುಟುಂಬ ಸದಸ್ಯರು ಜೊತೆ ಇದ್ದರು. ಈ ವೇಳೆ ಅಭಿಮಾನಿಗಳಿಂದ ಬಿ.ಎಸ್ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ದೊರೆಯಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ಮುಂದಿನ ಬಾರಿಯೂ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಪಣ ತೊಟ್ಟಿದ್ದೇವೆ ಎಂದು ಹೇಳಿದರು.