DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು

Feb 21, 2023

 
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸುಳಿವು ನೀಡಿದ್ದಾರೆ. ಮೇಘಳಾಪುರದಲ್ಲಿ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸೀರೆ, ಸೈಕಲ್ ಬಿಟ್ಟರೆ ಬೇರೆ ಏನು ಕೊಡಲಿಲ್ಲ ಎಂದ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಡಿಕೆಶಿ ಮತದಾರರಲ್ಲಿ ಮYathindra Siddaramaiahನವಿ ಮಾಡಿದ್ದಾರೆ.
 

ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅದಕ್ಕಾಗಿ ಬಿರುಸಿನ ಸಿದ್ಧತೆಯೂ ನಡೆಯುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಬೆಂಬಲಿಗರು ಕೋಲಾರದಲ್ಲಿ ಚುನಾವಣೆ ಸಿದ್ಧತೆ, ಪ್ರಚಾರ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಆಸೆ ಬಿಚ್ಚಿಟ್ಟಿದ್ದ ಡಿಕೆಶಿ

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸೋಮವಾರ ಮಾತನಾಡಿದ್ದ ಡಿಕೆಶಿ, ಇನ್ನು ಕೇವಲ 50 ದಿನಗಳ ಕಾಲ ಮಾತ್ರ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುತ್ತದೆ. 50 ದಿನಗಳ ಬಳಿಕ ನಿಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಮೂರನೇ ಮಹಡಿಗೆ ಬಂದು ನನ್ನನ್ನು ಭೇಟಿಯಾಗಬೇಕು ಎಂದು ಹೇಳಿದ್ದರು. ಈ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂಬುದನ್ನು ಬಹಿರಂಗಪಡಿಸಿದ್ದರು.

 

 

 

Source: TV9KANNADA