HD Deve Gowda Birthday: ಪ್ರಧಾನಿಯಾದ ಏಕೈಕ ಕನ್ನಡಿಗ ಹೆಚ್ಡಿ ದೇವೇಗೌಡರ ಅಪರೂಪದ ಚಿತ್ರಗಳು Posted by admin | May 18, 2023 | News | 0 | HD Deve Gowda Birthday: ಪ್ರಧಾನಿಯಾದ ಏಕೈಕ ಕನ್ನಡಿಗ ಹೆಚ್ಡಿ ದೇವೇಗೌಡರ ಅಪರೂಪದ ಚಿತ್ರಗಳುMay 18, 2023 ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ದೇವೇಗೌಡರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. 1 / 10 ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ದೇವೇಗೌಡರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. 1996 ರಿಂದ 97 ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ಹಾಗೂ 1994 ರಿಂದ 96 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿರುವ ಇವರು ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. 2 / 10 1933ರ ಮೇ 18ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಹೆಚ್ಡಿಡಿ 20 ವರ್ಷದ ಯುವಕನಾಗಿದ್ದಾಗಲೇ ರಾಜಕಾರಣಕ್ಕೆ ಧುಮುಕಿದರು. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಸೇರಿದ್ದರು. 3 / 10 ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು 4 / 10 ದೊಡ್ಡೇಗೌಡ ಮತ್ತು ಶ್ರೀಮತಿ ದೇವಮ್ಮ ಅವರ ಪುತ್ರರಾಗಿ ಜನಿಸಿದ ಶ್ರೀದೇವೇಗೌಡರಿಗೆ ತಾವು ಸರಳ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದಕ್ಕೆ ಹೆಮ್ಮೆ ಇದೆ. ಶೀಮತಿ ಚೆನ್ನಮ್ಮ ಅವರನ್ನು ವಿವಾಹವಾದ ದೇವೇಗೌಡ ದಂಪತಿಗಳಿಗೆ ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದಾರೆ. 5 / 10 ಸಮಾಜದ ಎಲ್ಲ ವರ್ಗಗಳ ಜನರ ಅಹವಾಲುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿ ಪರಿಹಾರ ನೀಡಲು ಯತ್ನಿಸುವ ತಮ್ಮ ಗುಣದಿಂದ ದೇವೇಗೌಡರು ’ಮಣ್ಣಿನ ಮಗ’ ಎಂದು ಹೆಸರುವಾಸಿಯಾಗಿದ್ದಾರೆ. ಈ ಚಿತ್ರ 1994ರಲ್ಲಿ ಹೆಚ್ಡಿ ದೇವೇಗೌಡರು ಸಿಎಂ ಆಗಿದ್ದಾಗ ತೆಗೆದ ಚಿತ್ರ. 6 / 10 ತಮ್ಮ 91ನೇ ವಯಸ್ಸಿನಲ್ಲೂ ಕನ್ನಡಕ ಬಳಸದೇ, ಧ್ವನಿಯಲ್ಲಿ ಬದಲಾವಣೆ ಇಲ್ಲದೆ ಆರೋಗ್ಯವಂತರಾಗಿರುವ ಹೆಚ್ಡಿ ದೇವೇಗೌಡರು ಯೋಗ ಮಾಡುತ್ತಾರೆ. ಕಟ್ಟುನಿಟ್ಟಿನ ಜೀವನ ಶೈಲಿಯಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ. 7 / 10 1995ರ ಜನವರಿ ತಿಂಗಳಲ್ಲಿ ಹೆಚ್ಡಿಡಿ ಸ್ವಿಟ್ಜರಲೆಂಡಿನಲ್ಲಿ ನಡೆದ ಅಂತಾರಾಷ್ಟ್ರೀಯ ಅರ್ಥಶಾಸ್ತ್ರಜ್ಞರ ಫೋರಂ ಸಮಾವೇಶದಲ್ಲಿ ಭಾಗವಹಿಸಿದರು. ನಂತರ ಇವರು ಸಿಂಗಾಪುರ ಪ್ರವಾಸಕ್ಕೆ ತೆರಳಿ ಕರ್ನಾಟಕಕ್ಕೆ ಸಾಕಷ್ಟು ವಿದೇಶಿ ಬಂಡವಾಳ ಹರಿದು ಬರಲು ಕಾರಣರಾದರು. 8 / 10 1983 ರಿಂದ 1988 ರವರೆಗೆ ಅಸ್ತಿತ್ವದಲ್ಲಿದ್ದ ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದ ಸರಕಾರದಲ್ಲಿ ದೇವೇಗೌಡರು ಸಚಿವರಾಗಿ ಕೆಲಸ ಮಾಡಿದರು 9 / 10 ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77)ಇವರನ್ನು ಬೆಂಗಳೂರಿನ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು. 10 / 10 ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ 30, 1996ರಂದು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ದೇವೇಗೌಡರು ರಾಜೀನಾಮೆ ನೀಡಿದ್ದರು. Source: Tv9 Kannada