ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ನಂಬರ್ 1 ಬೌಲರ್

Jan 25, 2023

Mohammed Siraj: ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಬಳಿಕ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.

 

ಐಸಿಸಿ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಸರ್ವಶ್ರೇಷ್ಠ ಸಾಧನೆಯೊಂದಿಗೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯಾದ್ಭುತ ಪ್ರದರ್ಶನ ನೀಡಿರುವ ಸಿರಾಜ್ 5 ಪಂದ್ಯಗಳಿಂದ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್​ರನ್ನು ಹಿಂದಿಕ್ಕಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.

ವಿಶೇಷ ಎಂದರೆ ಇದು ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಬಳಿಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ. ಹಾಗಿದ್ರೆ ನೂತನ ಐಸಿಸಿ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ…

1- ಮೊಹಮ್ಮದ್ ಸಿರಾಜ್ (ಭಾರತ)- 729 ಅಂಕಗಳು

2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 727 ಅಂಕಗಳು

3- ಟ್ರೆಂಟ್ ಬೌಲ್ಟ್ (ನ್ಯೂಜಿಲೆಂಡ್)- 708 ಅಂಕಗಳು

4- ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ)- 665 ಅಂಕಗಳು

5- ರಶೀದ್ ಖಾನ್ (ಅಫ್ಘಾನಿಸ್ತಾನ್)- 659 ಅಂಕಗಳು

6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 665 ಅಂಕಗಳು

Source: TV9Kannada