IND vs AUS: ಭಾರತ- ಆಸೀಸ್ ಕೊನೆಯ ಟೆಸ್ಟ್ ಕಾಳಗಕ್ಕೆ ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಉಪಸ್ಥಿತಿ

Feb 22, 2023

 

IND vs AUS: ಉಭಯ ತಂಡಗಳ ನಡುವಿನ ಈ ಪಂದ್ಯ ಮಾರ್ಚ್ 9 ರಿಂದ ನಡೆಯಲಿದ್ದು, ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಮಾರ್ಚ್ 9 ರಿಂದ ನಡೆಯಲಿದ್ದು, ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ (Anthony Albanese) ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಆಲ್ಬನೀಸ್​ ನಾಲ್ಕನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ, ಇದೀಗ ಈ ಸುದ್ಧಿ ದೃಢಪಟ್ಟಿದ್ದು, ಅಂತಿಮ ಟೆಸ್ಟ್ ಪಂದ್ಯ ವೀಕ್ಷಿಸಲು ಉಭಯ ದೇಶಗಳ ಪ್ರಧಾನಿಗಳು ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಲ್ಕನೇ ಟೆಸ್ಟ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮಾರ್ಚ್ 9 ರಿಂದ ಉಭಯ ದೇಶಗಳ ನಡುವಿನ ಪಂದ್ಯ ಆರಂಭವಾಗಲಿದ್ದು, ಇದೇ ವೇಳೆ ಭಾರತ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಈ ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ.

ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

ನಾಗ್ಪುರದಲ್ಲಿ ಮೊದಲ ಟೆಸ್ಟ್ ಗೆದ್ದಿದ್ದ ಟೀಂ ಇಂಡಿಯಾ ಬಳಿಕ ದೆಹಲಿ ಟೆಸ್ಟ್‌ನಲ್ಲಿಯೂ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. ಇದರೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಎರಡು ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಇಂದೋರ್‌ನಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ಇದೇ ವೇಳೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ 2 ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಈ ಹಿಂದೆ ತಂಡದಲ್ಲಿದ್ದ ಬಹುತೇಕ ಆಟಗಾರರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದೋರ್‌ನಲ್ಲಿ ಮೂರನೇ ಟೆಸ್ಟ್

ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಮಾರ್ಚ್ 1 ರಿಂದ ನಡೆಯಲಿದ್ದು, ಸರಣಿಯ ಮೂರನೇ ಪಂದ್ಯ ಉಭಯ ತಂಡಗಳ ನಡುವೆ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ ವಿರುದ್ಧದ ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್ , ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್.

 

Source: TV9KANNADA