IPL 2023: ಸೋತರೂ ಐಪಿಎಲ್ನಲ್ಲಿ ಹೊಸ ದಾಖಲೆ ನಿರ್ಮಿಸಿದ ಫಾಫ್-ಕಿಂಗ್ ಕೊಹ್ಲಿ
IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.
![IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ನ 70ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.](https://images.tv9kannada.com/wp-content/uploads/2023/05/Faf-Kohli-1-2.jpg)
![ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.](https://images.tv9kannada.com/wp-content/uploads/2023/05/Virat-Kohli-Faf-3.jpg)
![ಮೊದಲೆರಡು ಓವರ್ಗಳಲ್ಲಿ ಎಚ್ಚರಿಕೆಯ ಆಟವಾಡಿದ ಈ ಜೋಡಿಯು ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ಶಮಿ ಎಸೆದ 3ನೇ ಓವರ್ನಲ್ಲಿ 4 ಫೋರ್ನೊಂದಿಗೆ ಫಾಫ್ 16 ರನ್ ಚಚ್ಚಿದರು. ಇನ್ನು ಯಶ್ ದಯಾಳ್ ಅವರ 4ನೇ ಓವರ್ನಲ್ಲಿ 17 ರನ್ ಬಾರಿಸಿದರು.](https://images.tv9kannada.com/wp-content/uploads/2023/05/Faf-Kohli-3.jpg)
![ಇನ್ನು ಐದನೇ ಓವರ್ನಲ್ಲೇ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು. ಅಲ್ಲದೆ ಪವರ್ಪ್ಲೇನಲ್ಲಿ 62 ರನ್ ಸಿಡಿಸಿ ಕಿಂಗ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಅಬ್ಬರಿಸಿದರು. ಈ ಅಬ್ಬರದ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.](https://images.tv9kannada.com/wp-content/uploads/2023/05/Faf-Kohli-2-1.jpg)
![ಹೌದು, ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್ನಲ್ಲಿ ಅತ್ಯಧಿಕ ಬಾರಿ ಅರ್ಧಶತಕದ ಜೊತೆಯಾಟವಾಡಿದ ದಾಖಲೆ ಫಾಫ್ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. ಸಿಎಸ್ಕೆ ಪರ ಆರಂಭಿಕ ಕಣಕ್ಕಿಳಿದಿದ್ದ ಈ ಜೋಡಿಯು 2021 ರಲ್ಲಿ ಒಟ್ಟು 7 ಬಾರಿ ಅರ್ಧಶತಕದ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದರು.](https://images.tv9kannada.com/wp-content/uploads/2023/05/Faf-Rutu.jpg)
![ಈ ಬಾರಿಯ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿಯ ಜೊತೆಗೂಡಿ ಫಾಫ್ ಡುಪ್ಲೆಸಿಸ್ 8 ಬಾರಿ ಅರ್ಧಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್ನ ಹಳೆಯ ದಾಖಲೆಯನ್ನು ಅಳಿಸಿ ಹಾಕಿ, ಫಾಫ್-ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.](https://images.tv9kannada.com/wp-content/uploads/2023/05/Virat-Kohli-Faf-2-2.jpg)
![ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (38) ಹಾಗೂ ಫಾಫ್ ಡುಪ್ಲೆಸಿಸ್ (28) ಮೊದಲ ವಿಕೆಟ್ಗೆ 67 ರನ್ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ನೂರ್ ಅಹ್ಮದ್ರ ಎಸೆತದಲ್ಲಿ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು.](https://images.tv9kannada.com/wp-content/uploads/2023/05/Faf-Kohli-4.jpg)
Source: Tv9 Kannada