Karnataka School Reopen: ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್

Sep 29, 2021

ಬೆಂಗಳೂರು: ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

Source:tv9kannada