Mysuru University: ಸೆಪ್ಟೆಂಬರ್ 3ರಿಂದ ಆರಂಭವಾಗಿದ್ದ ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

Sep 2, 2021

ಮೈಸೂರು: ನಾಳೆಯಿಂದ (ಸೆಪ್ಟೆಂಬರ್ 3) ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳ ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆಯ ಬದಲು ಸೆಪ್ಟೆಂಬರ್ 13ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಮುಂದೂಡಿಕೆ ಬಗ್ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್‌ ಅಧಿಕೃತ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯ. ಈಗಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಹ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್‌ ತಿಳಿಸಿದ್ದಾರೆ.

Source:Tv9kannada