ರೆಡ್ಮಿ ತನ್ನ ಎ ಸರಣಿಯಲ್ಲಿ ಬಜೆಟ್ ಬೆಲೆಗೆ ಕಳೆದ ತಿಂಗಳು ಬಿಡುಗಡೆ ಮಾಡಿದ ರೆಡ್ಮಿ ಎ2 (Redmi A2) ಸ್ಮಾರ್ಟ್‌ಫೋನ್‌ ಇದೀಗ ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ.

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀದ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಅಥವಾ ಈಗಾಗಲೇ ರಿಲೀಸ್ ಆಗಿರುವ ಫೋನ್​ಗಳ ಹೊಸ ವೇರಿಯೆಂಟ್ ಅನಾವರಣ ಮಾಡುತ್ತಿದೆ. ಅದರಂತೆ ಇದೀಗ ರೆಡ್ಮಿ ತನ್ನ ಎ ಸರಣಿಯಲ್ಲಿ ಬಜೆಟ್ ಬೆಲೆಗೆ ಕಳೆದ ತಿಂಗಳು ಬಿಡುಗಡೆ ಮಾಡಿದ ರೆಡ್ಮಿ ಎ2 (Redmi A2) ಸ್ಮಾರ್ಟ್‌ಫೋನ್‌ ಇದೀಗ ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ. ಇಂದು ರೆಡ್ಮಿ A2 ಫೋನಿನ 64GB ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಕಾಣಲಿದೆ.

ಬೆಲೆ ಎಷ್ಟು?:

ಇದೀಗ ರೆಡ್ಮಿA2 ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ ಇದರ 2GB + 32GB ಆಯ್ಕೆಗೆ 5,999 ರೂ., 2GB + 64GBಗೆ 6,499 ರೂ. ಮತ್ತು 4GB + 64GB ಆಯ್ಕೆಗೆ 7,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಅಮೆಜಾನ್‌,ಮಿ.ಕಾಮ್‌, ಮೀ ಹೋಮ್ಸ್‌ ಮತ್ತು ಆದ್ಯತೆಯ ಪಾಲುದಾರ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ರೆಡ್ಮಿ A2 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ LCD ಡಿಸ್‌ ಪ್ಲೇಯನ್ನು ಹೊಂದಿವೆ. ಈ ಡಿಸ್‌ ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು, ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಿಂದ ಕೂಡಿದೆ. ಪ್ರೊಸೆಸರ್ ಕೂಡ ಸೇಮ್ ಇದೆ. ಮೀಡಿಯಾಟೆಕ್‌ ಹಿಲಿಯೋ G36SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು ಆಂಡ್ರಾಯ್ಡ್‌ 12 (Go Edition) ಬೆಂಬಲ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ರೆಡ್ಮಿ A2 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಮುಖ್ಯ ಕ್ಯಾಮೆರಾ 8MP ಸೆನ್ಸಾರ್‌ ಹೊಂದಿದ್ದು, LED ಫ್ಲ್ಯಾಷ್ ಅನ್ನು ಒಳಗೊಂಡಿದೆ. 0.08 ಮೆಗಾಫಿಕ್ಸೆಲ್​ನ ಡೆಪ್ತ್ ಸೆನ್ಸಾರ್ ನೀಡಲಾಗಿದೆ. ಇದಲ್ಲದೆ ವಿಡಿಯೋ ಕರೆಗಳು ಮತ್ತು ಸೆಲ್ಫಿಗಳಿಗಾಗಿ 5MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ರೆಡ್ಮಿ A2 5000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ. ಇದು ಮೈಕ್ರೋ-ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಲ್ಲಿ 10W ಚಾರ್ಜಿಂಗ್ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, 2.4GHz ವೈಫೈ, ಬ್ಲೂಟೂತ್ 5.0, GPS, ಗ್ಲೋನಾಸ್ ಮತ್ತು ಗೆಲಿಲಿಯೋವನ್ನು ಬೆಂಬಲಿಸುತ್ತವೆ. 5ಜಿ ಸಪೋರ್ಟ್ ನೀಡಲಾಗಿಲ್ಲ.

Source: TV9 Kannada

 
 
 

Redmi A2: ಬೆಲೆ ಕೇವಲ 7,499 ರೂ.: ಇಂದಿನಿಂದ ರೆಡ್ಮಿ A2 ಫೋನ್ ಹೊಸ ವೇರಿಯಂಟ್​ನಲ್ಲಿ ಲಭ್ಯ

Jun 20, 2023