Thank You Coronavirus Helpers: ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಡೂಡಲ್ ಗೌರವ ಸಲ್ಲಿಸಿದ ಗೂಗಲ್
Google Doodles: ಕೊವಿಡ್ ವಿರುದ್ಧ ಹೋರಾಟಕ್ಕೆ ಸಹಕಾರ ನೀಡಿದ ವೈಜ್ಞಾನಿಕ ಕ್ಷೇತ್ರದ ಎಲ್ಲ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಬರೆಯಲಾಗಿದೆ.
ಜಗತ್ತಿಗೆ ಕೊರೊನಾ ಸೋಂಕು ಕಾಲಿಟ್ಟು ವರ್ಷಗಳೇ ಕಳೆದಿವೆ. ಎಲ್ಲ ರಾಷ್ಟ್ರಗಳೂ ಸಹ ಈ ಸೋಂಕಿನ ವಿರುದ್ಧ ಹೋರಾಡುತ್ತಿವೆ. ಇದನ್ನು ನಿರ್ಮೂಲನ ಮಾಡಲು ಸಾಧ್ಯವಿಲ್ಲ, ವೈರಸ್ ವಿರುದ್ಧ ಬದುಕಬೇಕು ಎಂಬ ಕಹಿ ಸತ್ಯವನ್ನು ಅರ್ಥಮಾಡಿಕೊಂಡು, ಅದರೊಟ್ಟಿಗೆ ಬದುಕಲು ಸಿದ್ಧವಾಗುತ್ತಿವೆ.
ಈ ಮಧ್ಯೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ಕ್ಷೇತ್ರಗಳ ಸಿಬ್ಬಂದಿ ಮುಂಚೂಣಿಯಲ್ಲಿ ನಿಂತು ಕೊರೊನಾ ವೈರಸ್ ವಿರುದ್ಧ ಹೋರಾಡಿದ್ದಾರೆ. ಜನರ ಸುರಕ್ಷತೆಗಾಗಿ ತಮ್ಮ ಪ್ರಾಣಗಳನ್ನೇ ಪಣಕ್ಕಿಟ್ಟುಕೊಂಡಿದ್ದಾರೆ. ಇನ್ನು ಇವರೆಲ್ಲರೊಟ್ಟಿಗೆ ಕೊರೊನಾ ವಿರುದ್ಧ ಹೋರಾಟದಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದು ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರ. ಕೊರೊನಾ ಲಸಿಕೆ ಕಂಡು ಹಿಡಿಯುವ ಮೂಲಕ ಕೊರೊನಾ ಮಹಾಮಾರಿಯಿಂದ ಜನರನ್ನು ರಕ್ಷಿಸುತ್ತಿದೆ.
ಇದೀಗ ಈ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಕ್ಕೆ, ಸರ್ಚ್ ಎಂಜಿನ್ ದೈತ್ಯ ಗೂಗಲ್ ತನ್ನ ಡೂಡಲ್ ಮೂಲಕ ಗೌರವ ಅರ್ಪಿಸಿದೆ. ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಗೌರವ ಸಲ್ಲಿಸಲು ಎನಿಮೇಟೆಡ್ ಡೂಡಲ್ ರಚಿಸಿದೆ. ಇದರಲ್ಲಿ ಮೊದಲ G ಒಂದು ಹಾರ್ಟ್ ಮಾರ್ಕ್ನ್ನು ಕೊನೆಯಲ್ಲಿರುವ E ಗೆ ಕಳಿಸುವಂತೆ ರಚಿಸಲಾಗಿದೆ. ಕೊನೆಯಲ್ಲಿರುವ E ಯನ್ನು ವಿಜ್ಞಾನಿಗಳು ಮತ್ತು ಸಂಶೋಧಕರು ರಿಸರ್ಚ್ ಮಾಡುತ್ತಿರುವಂತೆ ಇಡಲಾಗಿದೆ.
ಈ ಗೂಗಲ್ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ, ಧನ್ಯವಾದಗಳು- ಕೊವಿಡ್ ವಿರುದ್ಧ ಹೋರಾಟಕ್ಕೆ ಸಹಕಾರ ನೀಡಿದ ವೈಜ್ಞಾನಿಕ ಕ್ಷೇತ್ರದ ಎಲ್ಲ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಬರೆಯಲಾಗಿದೆ.
ಕೆಲವು ವಿಶೇಷ ಸಂದರ್ಭಗಳಲ್ಲಿ ಗೂಗಲ್ ತನ್ನ ಡೂಡಲ್ ಮೂಲಕ ಪ್ರಸ್ತುತಪಡಿಸುತ್ತದೆ. ಕಳೆದವರ್ಷವೂ ಸಹ ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದು ಹೋರಾಟ ನಡೆಸುತ್ತಿದ್ದ ಸಿಬ್ಬಂದಿಗೆ ಡೂಡಲ್ ಗೌರವ ಅರ್ಪಿಸಿತ್ತು.
Source:TV9Kannada