WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಚಾಟ್ ಲಾಕ್ ಫೀಚರ್: ಹೇಗೆ ಬಳಸುವುದು?

May 20, 2023

 

ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

ವಾಟ್ಸ್​ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ (WhatsApp) ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಬಳಕೆದಾರರ ಪ್ರೈವಸಿ ವಿಚಾರದಲ್ಲಿ ಯಾವಾಗಲೂ ಮುಂದಿರುವ ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

ಹೆಚ್ಚುವರಿ ಗೌಪ್ಯತೆ ಮತ್ತು ಭದ್ರತೆಯನ್ನು ಮೆಟಾ ಮಾಲೀಕತ್ವದ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತದೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ.

 

Source: Tv9 Kannada